ಮಂಜೇಶ್ವರ, ಜು 21 (DaijiworldNews/PY): ಜು 25 ನಾಗರ ಪಂಚಮಿ ದಿನದಂದು ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಅಧಿಕ ಸಂಖ್ಯೆಯಲ್ಲಿ ಆಗಮಿಸುವ ಭಕ್ತಾಧಿಗಳಿಂದ ಸಾಮಾಜಿಕ ಅಂತರವನ್ನು ಕಾಪಾಡುವುದು ಕಷ್ಟಕರವಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ ಜು 25ರಂದು ಎಲ್ಲಾ ಭಕ್ತಾಧಿಗಳಿಗೆ ಕ್ಷೇತ್ರಕ್ಕೆ ಭೇಟಿಯನ್ನು ನಿರ್ಬಂಧಿಸಲಾಗಿದೆ ಎಂದು ಶ್ರೀಮತ್ ಅನಂತೇಶ್ವರ ದೇವಸ್ಥಾನ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಜು 25ರಂದು ಯಾವುದೇ ಭಕ್ತಾಭಿಮಾನಿಗಳು ದೇವಾಲಯಕ್ಕೆ ಭೇಟಿ ನೀಡದೇ ಸಹಕರಿಸುವಂತೆ ವಿನಂತಿಸಿಕೊಂಡಿದ್ದಾರೆ.
ನಾಗರ ಪಂಚಮಿ ದಿನದಂದು ದೇವಾಲಯದಲ್ಲಿ ಯಾವುದೇ ಸೇವೆಗಳು, ಸೇವಾ ಪ್ರಸಾದ ವಿತರಣೆ, ತೀರ್ಥ ಪ್ರಸಾದ ಹಾಗೂ ಅನ್ನಸಂತರ್ಪಣೆಗಳು ಇರುವುದಿಲ್ಲ. ಅಲ್ಲದೇ, ಜು 25ರಂದು ಹಾಲು, ಸೀಯಾಳ, ಹಣ್ಣುಕಾಯಿ ಮತ್ತಿತರ ಯಾವುದೇ ಪೂಜಾ ಸಾಮಾಗ್ರಗಳನ್ನು ಸ್ವೀಕರಿಸಲಾಗುವುದಿಲ್ಲ, ಮುಂದಿನ ದಿನಗಳಲ್ಲಿ ಅನುಕೂಲಕರ ಪರಿಸ್ಥಿತಿ ಉಂಟಾದಾಗ ಭಕ್ತಾದಿಗಳಿಗೆ ಸೇವೆಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.