ಮಂಗಳೂರು, ಜು 21(DaijiworldNews/SM): ದ.ಕ. ಜಿಲ್ಲೆಯಲ್ಲಿ ಮತ್ತೆ 149 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3834ಕ್ಕೆ ಏರಿಕೆಯಾಗಿದೆ.

ಇನ್ನು ಮಂಗಳವಾರದಂದು 127 ಮಂದಿ ಸೋಂಕಿನಿಂದ ಮುಕ್ತರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಇಲ್ಲಿಯ ತನಕ ಜಿಲ್ಲೆಯ 1675 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾದಂತಾಗಿದೆ.