ಉಡುಪಿ, ಜು 21(DaijiworldNews/SM): ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ನಡುವೆ ಉಡುಪಿ ಜಿಲ್ಲಾಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ. ಮಂಗಳವಾರದಂದು ಸಿಟಿ ರೌಂಡ್ಸ್ ಕೈಗೊಂಡ ಜಿಲ್ಲಾಧಿಕಾರಿ ಜಿ. ಜಗದೀಶ್ ಕೋವಿಡ್ ಸಂಬಂಧಿಸಿದ ನಿಯಮ ಉಲ್ಲಂಘಿಸುತ್ತಿದ್ದವರ ವಿರುದ್ಧ ಕ್ರಮಕೈಗೊಂಡಿದ್ದಾರೆ.







ಉಡುಪಿಯ ಸರ್ವಿಸ್ ಬಸ್ ನಿಲ್ದಾಣ, ಸಂಸ್ಕ್ರತ ಕಾಲೇಜು ರಸ್ತೆ, ಮಸೀದಿ ರಸ್ತೆಯ ಅಂಗಡಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವ ಕುರಿತಂತೆ ಪರಿಶೀಲನೆ ನಡೆಸಿದರು. ಸಾಮಾಜಿಕ ಅಂತರ ಕಾಯ್ದುಕೊಳ್ಳದವರ ವಿರುದ್ಧ ಜಿಲ್ಲಾಧಿಕಾರಿಗಳು ಕ್ರಮ ಕೈಗೊಂಡ ಬಗ್ಗೆ ವರದಿಯಾಗಿದೆ. ಇನ್ನು ನಗರದಲ್ಲಿ ಕೆಲವರು ಮಾಸ್ಕ್ ಧರಿಸದೇ ಓಡಾಡುತ್ತಿದ್ದರು. ಅವರ ವಿರುದ್ಧ ಕ್ರಮಕೈಗೊಂಡ ಜಿಲ್ಲಾಧಿಕಾರಿಗಳ ತಂಡ ಮಾಸ್ಕ್ ಧರಿಸದೇ ಓಡಾಡುವವರಿಗೆ ದಂಡ ವಿಧಿಸಿದರು. ಮಾಸ್ಕ್ ಹಾಕದ ಸಾರ್ವಜನಿಕರಿಗೆ ಸ್ಥಳದಲ್ಲೇ 100 ರೂಪಾಯಿ ದಂಡ ವಿಧಿಸಿದರು.
ಇನ್ನು ಜಿಲ್ಲಾಧಿಕಾರಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸುತ್ತಿದ್ದಂತೆ ಸ್ಥಳದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ್ದ ಕೆಲವು ಯುವಕರು ಬೈಕ್ ಹಾಗೂ ಕಾರುಗಳಲ್ಲಿ ಪರಾರಿಯಾದ ಘಟನೆ ಕೂಡ ನಡೆಯಿತು. ನಿಯಮ ಉಲ್ಲಂಘಿಸಿದವರಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಖಡಕ್ ಎಚ್ಚರಿಕೆ ನೀಡಿದ್ದು, ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.