ಮಂಗಳೂರು, ಜು 21(DaijiworldNews/SM): ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು ಕೊರೊನಾ ಸೋಂಕಿಗೆ ಮತ್ತೆ ಐವರು ಬಲಿಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಮತ್ತೆ ಹೆಚ್ಚಳವಾಗಿದೆ.

ಮಂಗಳೂರು ನಿವಾಸಿ 81 ವರ್ಷದ ಗಂಡಸು ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಅವರು ಜುಲೈ 17ರಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಕೋವಿಡ್ ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಇನ್ನು 51 ವರ್ಷದ ಬೆಳ್ತಂಗಡಿ ನಿವಾಸಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಅವರು ಜೂನ್ 20ರಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶ್ವಾಸಕೋಶದ ತೊಂದರೆ, ತೀವ್ರ ರಕ್ತದೊತ್ತಡ, ಡಯಾಬಿಟೀಸ್, ಉಸಿರಾಟದ ತೊಂದರೆಯಿಂದ ಅವರು ಬಳಲುತ್ತಿದ್ದರು. ಅವರಲ್ಲಿ ಸೋಂಕು ಪತ್ತೆಯಾಗಿದ್ದು, ಇದೀಗ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
65 ವರ್ಷದ ಭಟ್ಕಳ ನಿವಾಸಿ ಕೊರೊನಾಗೆ ಬಲಿಯಾಗಿದ್ದಾರೆ. ಅವರು ಜುಲೈ 12ರಂದು ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದರು. ಜುಲೈ 20ರಂದು ಅವರು ಮೃತಪಟ್ಟಿದ್ದು, ಅವರಲ್ಲಿ ಸೋಂಕು ಇರುವುದು ದೃಢಪಟ್ಟಿದೆ.
ಹಾವೇರಿಯ ನಿವಾಸಿ 63 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಜೂನ್ 27ರಂದು ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಕ್ಯಾನ್ಸರ್ ಸೇರಿದಂತೆ ಇತರ ಅನಾರೋಗ್ಯದಿಂದ ಬಳಲುತ್ತಿದ್ದರು. ಇದೀಗ ಹೃದಯಾಘಾತದಿಂದ ಮೃತಪಟ್ಟಿದ್ದು, ಅವರಲ್ಲಿ ಸೋಂಕು ಇರುವುದು ದೃಢಪಟ್ಟಿದೆ.
52 ವರ್ಷದ ಮಂಗಳೂರು ಮೂಲದ ಮಹಿಳೆ ಸೋಂಕಿಗೆ ಬಲಿಯಾದ ಬಗ್ಗೆ ವರದಿಯಾಗಿದೆ. ಅವರು ಜುಲೈ 19ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಹೃದಯ ಸಂಬಂಧಿ ಕಾಯಿಲೆ ಸೇರಿದಂತೆ ಇತರ ರೋಗದಿಂದ ಬಳಲುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಆ ಮೂಲಕ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 88 ಕ್ಕೆ ಏರಿಕೆಯಾಗಿದೆ.