ಉಡುಪಿ, ಜು 21(DaijiworldNews/SM): ಜಿಲ್ಲೆಯಲ್ಲಿ ಜುಲೈ 22ರ ಬುಧವಾರದಿಂದ ಮತ್ತೆ ಬಸ್ ಸಂಚಾರಕ್ಕೆ ಅವಕಾಶ ನೀಡಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ನೀಡಿದ್ದಾರೆ.

ಕೊರೊನಾ ವಿಚಾರದಿಂದ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಲಾಕ್ ಡೌನ್ ಮಾಡಿದ್ದು, ಇನ್ನು ಮುಂದೆ ಯಾವುದೇ ಲಾಕ್ ಡೌನ್ ಇಲ್ಲ ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದ ಬಳಿಕ, ರಾಜ್ಯ ಸರಕಾರದ ನಿರ್ಧಾರದಂತೆ ಜಿಲ್ಲಯಲ್ಲಿ ಕೂಡಾ ನಿಯಮಗಳಲ್ಲಿ ಸಡಿಲಿಕೆ ಮಾಡಲಾಗಿದೆ.
ಬಸ್ ಗಳಲ್ಲಿ ಸಾಮಾಜಿಕ ಅಂತರ ಅಗತ್ಯವಾಗಿ ಬೇಕಾಗಿದೆ. ಅಲ್ಲದೆ, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಇನ್ನು ಬಸ್ ಗಳನ್ನು ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಲೇಬೇಕು. ಸಾರ್ವಜನಿಕರು ಬಸ್ ಸೇವೆಯನ್ನು ಸಂಯಮದಿಂದ ಬಳಸಲು ಜಿಲ್ಲಾಧಿಕಾರಿ ಜಿ. ಜಗದೀಶ್ ಮನವಿ ಮಾಡಿಕೊಂಡಿದ್ದಾರೆ.
ಜಿಲ್ಲಾ ಗಡಿಗಳಲ್ಲಿ ಚೆಕ್ ಪೋಸ್ಟ್ ಎಂದಿನಂತೆ ಕಾರ್ಯನಿರ್ವಹಿಸಲಿದೆ. ಜಿಲ್ಲೆಯ ಒಳಗೆ ಬರುವ ಮತ್ತು ಹೊರ ಹೋಗುವ ವ್ಯಕ್ತಿಗಳನ್ನು ತೀವ್ರವಾಗಿ ತಪಾಸಣೆ ಗುರಿಪಡಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.