ಬೈಂದೂರು, ಜು 21(DaijiworldNews/SM): ಆರೋಗ್ಯ ಇಲಾಖೆಯ ನಾಲ್ವರು ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್ ದೃಢವಾಗಿದ್ದು ಬೈಂದೂರು ಸಮುದಾಯ ಆರೋಗ್ಯ ಕೇಂದ್ರವನ್ನು ಸೀಲ್ ಡೌನ್ ಮಾಡಲಾಗಿದೆ.

ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಸ್ಟಾಫ್ ನರ್ಸ್ ಹಾಗೂ ಇಬ್ಬರು `ಡಿ' ಗ್ರೂಫ್ ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್ ದೃಢವಾಗಿದೆ. ಇವರೆಲ್ಲರಿಗೆ ಜ್ವರದ ಲಕ್ಷಣವಿದ್ದ ಹಿನ್ನಲೆ ಗಂಟಲು ದ್ರವ ಪರೀಕ್ಷೆ ಮಾಡಿಸಲಾಗಿತ್ತು. ಇವರ ಪೈಕಿ ಒಬ್ಬರ ವರದಿ ಎರಡು ದಿನದ ಹಿಂದೆ ಹಾಗೂ ಮೂವರ ಕೋವಿಡ್-19 ವರದಿ ಸೋಮವಾರ ಬಂದಿದ್ದು ಎಲ್ಲರಿಗೂ ಸೋಂಕು ಇರುವುದು ತಿಳಿದಿದೆ.
ಬೈಂದೂರು ಸಮುದಾಯ ಆರೋಗ್ಯ ಕೇಂದ್ರವನ್ನು ಸ್ಯಾನಿಟೈಸ್ ಮಾಡಲಾಗಿದ್ದು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.