ಬ್ರಹ್ಮಾವರ, ಜು. 22 (DaijiworldNews/MB) : ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಲ್ಲೇ ಇದ್ದು ಬ್ರಹ್ಮಾವರದ ಹೆಗ್ಗುಂಜೆಯ ಎರಡು ಕಾರ್ಖಾನೆಗಳು ಹಾಗೂ ಮೂರು ಮನೆಗಳು ಸೀಲ್ಡೌನ್ ಮಾಡಲಾಗಿದೆ.




ಐರೋಡಿ ನಿವಾಸಿಗೆ ಕೊರೊನಾ ಪಾಸಿಟಿವ್ ಆದ ಬಳಿಕ ಅವರ ನಿವಾಸ ಮತ್ತು ಅವರು ಕಾರ್ಯ ನಿರ್ವಹಿಸುತ್ತಿದ್ದ ಸ್ಥಳವನ್ನು ಸೀಲ್ಡೌನ್ ಮಾಡಲಾಗಿದೆ. ಇನ್ನು ಹೆಗ್ಗುಂಜೆಯಲ್ಲಿರುವ ಕಾರ್ಖಾನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಸ್ಸಾಂ ಮೂಲದ ಮತ್ತಿಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಈ ಹಿನ್ನಲೆಯ ಕಾರ್ಖಾನೆಯನ್ನು ಮುಚ್ಚಲಾಗಿದೆ.
ಹಿಲಿಯಾನಾದ ವೃದ್ಧೆಯೊಬ್ಬರಿಗೆ ಸೋಂಕು ತಗುಲಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಎಲ್ಲಾ ಕೊರೊನಾ ರೋಗಿಗಳ ಪ್ರಾಥಮಿಕ ಸಂಪರ್ಕಗಳನ್ನು ಪತ್ತೆಹಚ್ಚುತ್ತಿದ್ದಾರೆ.