ಮಂಗಳೂರು, ಏ 17 : ಮುಂದಿನ ಐದು ವರ್ಷ ರಾಜ್ಯ ಆಳುವವರ ಹಣೆಬರಹ ನಿರ್ಧರಿಸುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಏ.17ರ ಮಂಗಳವಾರದಿಂದ ಆರಂಭವಾಗಲಿದೆ.
ಜಿಲ್ಲೆಯಲ್ಲೂ ಬೆಳಿಗ್ಗೆ 11 ಗಂಟೆಯಿಂದ 3 ಗಂಟೆಯವರೆಗೆ ನಾಮಪತ್ರ ಸ್ವೀಕಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ. ಈಗಾಗಲೇ ಎಂಟು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾಧಿಕಾರಿಗಳ ನೇಮಕ ಮಾಡಲಾಗಿದೆ. ನಾಮಪತ್ರ ಹಿಂತೆಗತಕ್ಕೆ ಏ.27 ಕೊನೆಯ ದಿನವಾಗಿರುತ್ತದೆ ಎಂದವರು ತಿಳಿಸಿದ್ದಾರೆ. ಈ ಮಧ್ಯೆ, ಅಭ್ಯರ್ಥಿಗಳಿಗೆ ಮಂಗಳವಾರದಿಂದಲೇ ‘ಬಿ’ ಫಾರಂ ವಿತರಿಸುವ ಮೂಲಕ ಗೊಂದಲಗಳಿಗೆ ತೆರೆ ಎಳೆಯಲು ಎರಡು ಪಕ್ಷಗಳ ವರಿಷ್ಠರು ತೀರ್ಮಾನಿಸಿದ್ದಾರೆ.