ಕಡಬ, ಜು 22 (Daijiworld News/MSP): ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಕಡಬ ತಾಲೂಕಿನ ಆಲಂಕಾರು ಗ್ರಾಮದ ಶರವೂರು ಸಮೀಪ ನಡೆದಿದೆ.

ಪಾಂಜೋಡಿ ಕಾಲೋನಿ ನಿವಾಸಿ ಕರಿಯ ಎಂಬವರ ಪುತ್ರಿ ಸಂಧ್ಯಾ (22) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಜು.22ರಂದು ಬೆಳಿಗ್ಗೆ ಮನೆಯ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕಡಬ ಪೊಲೀಸರಿಗೆ ಯುವತಿಯ ಮನೆಯವರು ದೂರು ನೀಡಿದ್ದು ,ತನಿಖೆಯ ಬಳಿಕ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬರಲಿದೆ.