ಸುಳ್ಯ, ಜು 22 (Daijiworld News/MSP): ಸುಳ್ಯ ಗಾಂಧಿನಗರದಿಂದ ಪೈಚಾರು ಕಡೆಗೆ ಸೂಟ್ ಕೇಸ್ನಲ್ಲಿ ದನದ ಮಾಂಸ ತುಂಬಿಸಿ ಪೈಚಾರು ಕಡೆ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಬಂಧಿತ ಆರೋಪಿಯನ್ನು ಕಲ್ಲುಮುಟ್ಲು ನಿವಾಸಿ ನಿಸಾರ್ (30) ಎಂದು ಗುರುತಿಸಲಾಗಿದೆ.
ಲಾಕ್ ಡೌನ್ ಹಿನ್ನಲೆಯಲ್ಲಿ ಪೊಲೀಸರು ಸುಳ್ಯದ ಜ್ಯೋತಿ ಸರ್ಕಲ್ ಬಳಿ ಸ್ಕೂಟರನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂತು. ಪೊಲೀಸರು ಸ್ಕೂಟರ್ ಸಮೇತ ದನದ ಮಾಂಸವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.