ಮಂಗಳೂರು, ಜು. 23, (DaijiworldNews/SM): ದ.ಕ. ಜಿಲ್ಲೆಯಲ್ಲಿ ಮತ್ತೆ 218 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ, ಈ ದಿನ ಜಿಲ್ಲೆಯಲ್ಲಿ 118 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

2253 ಮಂದಿ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ, ಗುರುವಾರದಂದು ಜಿಲ್ಲೆಯಲ್ಲಿ 7 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.