ಕಾರ್ಕಳ, ಏ 17 : ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಅವರ ಬೆಂಬಲಿಗನೊಬ್ಬ ಸೀಮೆ ಎಣ್ಣೆ ಸುರಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಏ 17ರ ಮಂಗಳವಾರ ಹೆಬ್ರಿಯಲ್ಲಿ ನಡೆದಿದೆ.
ಕಾರ್ಕಳ ಕ್ಷೇತ್ರದಲ್ಲಿ ಮುನಿಯಾಲ್ ಉದಯ ಕುಮಾರ್ ಶೆಟ್ಟಿ ಅವರಿಗೆ ಕಾಂಗ್ರೆಸ್ ಟಿಕೆಟ್ ತಪ್ಪಿ ಹೋಗಲು ವೀರಪ್ಪ ಮೊಯ್ಲಿಯೆ ಕಾರಣ ಎಂದು ಆರೋಪಿಸಿ ಹೆಬ್ರಿಯಲ್ಲಿ ಮುನಿಯಾಲು ಬೆಂಬಲಿಗರು ಪ್ರತಿಭಟನೆ ಮುಂದುವರಿದಿದ್ದು, ಈ ಸಂದರ್ಭ ಪ್ರತಿಭಟನಕಾರೊಬ್ಬ ಆತ್ಮಹತ್ಯೆಗೆ ಮುಂದಾಗಿದ್ದಾನೆ ಎಂದು ತಿಳಿದು ಬಂದಿದೆ.
.jpeg)
.jpeg)
.jpeg)
.jpeg)
ಕಾರ್ಕಳದಲ್ಲಿ ಕಾಂಗ್ರೆಸ್ ಟಿಕೆಟ್ಗಾಗಿ ಮಾಜಿ ಶಾಸಕ ಗೋಪಾಲ ಭಂಡಾರಿ, ಉದಯ ಕುಮಾರ ಶೆಟ್ಟಿ ಸ್ಪರ್ಧೆ ಏರ್ಪಟ್ಟಿತ್ತು. ಅಲ್ಲದೆ ಮುನಿಯಾಲು ಉದಯ ಕುಮಾರ ಶೆಟ್ಟಿ ಅವರಿಗೆ ಕಾಂಗ್ರೆಸ್ ಟಿಕೆಟ್ ಈ ಬಾರಿ ಖಚಿತ ಎಂಬ ಅಭಿಪ್ರಾಯವೂ ವ್ಯಕ್ತವಾಗಿತ್ತು. ಆದರೆ ಮಹತ್ತರ ಬೆಳವಣಿಗೆಯಲ್ಲಿ ಪಕ್ಷದ ಟಿಕೆಟ್ ಗೋಪಾಲ ಭಂಡಾರಿ ಅವರ ಪಾಲಾಗಿತ್ತು.