ಉಡುಪಿ, ಜು. 23, (DaijiworldNews/SM): ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಗುರುವಾರದಂದು ಹೊಸದಾಗಿ 160 ಕೊರೊನಾ ಪ್ರಕರಣ ಪತ್ತೆಯಾಗಿವೆ.

ಇಂದಿನ ಪ್ರಕರಣಗಳ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 2846 ಕ್ಕೆ ಏರಿಕೆಯಾಗಿದೆ. ಇನ್ನು ಇಂದು ಜಿಲ್ಲೆಯಲ್ಲಿ 65 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 653ಮಂದಿಯ ವರದಿ ಇನ್ನಷ್ಟೇ ಲಭ್ಯವಾಗಬೇಕಿದೆ. ಪ್ರಸ್ತುತ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 994.
ಮುಂಬಯಿ ಬಂದ 6 ಮಂದಿ, ಬೆಂಗಳೂರಿನಿಂದ ಬಂದ ಇಬ್ಬರು, ಪುಣೆ, ಮಂಗಳೂರಿನಿಂದ ಆಗಮಿಸಿದ್ದ ತಲಾ ಓರ್ವರಲ್ಲಿ ಸೊಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಇಂದು 42 ಐಎಲ್ ಐ ಪ್ರಕರಣಗಳು ಪತ್ತೆಯಾದರೆ, 4 ಸಾರಿ ಪ್ರಕರಣಗಳು ಪತ್ತೆಯಾಗಿವೆ.