ಉಡುಪಿ, ಜು 25 (Daijiworld News/MSP): ಉಡುಪಿ ಜಿಲ್ಲೆಯಲ್ಲಿ ಕೊರೊನಾದಿಂದ ಮತ್ತೊಂದು ಸಾವು ಸಂಭವಿಸಿದೆ. ಶಿವಮೊಗ್ಗದಿಂದ ಚಿಕಿತ್ಸೆಗಾಗಿ ಉಡುಪಿಗೆ ಬಂದಿದ್ದ 75 ವರ್ಷದ ವೃದ್ದ ಜುಲೈ 24ರ ಶುಕ್ರವಾರ ನಿಧನರಾಗಿದ್ದಾರೆ.

ಮೂತ್ರಪಿಂಡ ಮತ್ತು ಶ್ವಾಸಕೋಶಕ್ಕೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಶಿವಮೊಗ್ಗದಿಂದ ಬಂದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅವರ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೊಳಪಡಿಸಿದಾಗ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು.
ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ತುರ್ತುನಿಗಾ ಘಟಕದಲ್ಲಿರಿಸಿ ವೆಂಟಿಲೇಟರ್ ಬೆಂಬಲದೊಂದಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸಿದ ಜುಲೈ 24 ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ಸರ್ಕಾರದ ನಿಯಮಾವಳಿ ಪ್ರಕಾರ ಸ್ಥಳೀಯ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ.