ಉಡುಪಿ, ಜು. 25 (DaijiworldNews/MB) : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲ್ಲೇ ಇದ್ದು ಶನಿವಾರ ಮತ್ತೆ 182 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಇಂದು ಒಟ್ಟು 493 ವರದಿಗಳು ನೆಗೆಟಿವ್ ಆಗಿದ್ದು 182 ವರದಿಗಳು ಪಾಸಿಟಿವ್ ಆಗಿದೆ ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3218 ಕ್ಕೆ ಏರಿಕೆಯಾಗಿದೆ. ಇನ್ನು ಕೂಡಾ 528 ವರದಿಗಳು ಬರಬೇಕಾಗಿದೆ.
ಜಿಲ್ಲೆಯಲ್ಲಿ ಈವರೆಗೆ 2008 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಪ್ರಸ್ತುತ 1199 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಶಿವಮೊಗ್ಗ ಮೂಲದ ವ್ಯಕ್ತಿ ಶುಕ್ರವಾರ ರಾತ್ರಿ ಕೊರೊನಾದಿಂದ ಸಾವನ್ನಪ್ಪಿದ್ದು ಜಿಲ್ಲೆಯಲ್ಲಿ ಈವರೆಗೆ ಕೊರೊನಾ ಸೋಂಕಿಗೆ 13 ಮಂದಿ ಬಲಿಯಾಗಿದ್ದಾರೆ.