ಮಂಗಳೂರು, ಜು. 25 (DaijiworldNews/MB) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಏರಿಕೆಯಾಗುತ್ತಲ್ಲೇ ಇದ್ದು ಇಂದು ಮತ್ತೆ 218 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆಯು 4612 ಕ್ಕೆ ಏರಿಕೆಯಾಗಿದೆ.

46 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ, 87 ಐಎಲ್ಐ ಪ್ರಕರಣ, 15 ಎಸ್ಎಆರ್ಐ ಪ್ರಕರಣ ಹಾಗೂ 70 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಕೊರೊನಾ ಸೋಂಕು ತಗುಲಿದೆ.
ಈ ನಡುವೆ ಜಿಲ್ಲೆಯಲ್ಲಿ ಇಂದು 140 ಸೋಂಕಿತರು ಗುಣುಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಜಿಲ್ಲೆಯಲ್ಲಿ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 2127 ಕ್ಕೆ ಏರಿಕೆಯಾಗಿದೆ. ಪ್ರಸ್ತುತ 2370 ಮಂದಿ ನಗರದ ಕೋವಿಡ್ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಶನಿವಾರ ಜಿಲ್ಲೆಯಲ್ಲಿ ಜುಲೈ 23 ರಂದು ಸಾವನ್ನಪ್ಪಿದ ಐವರ ಕೊರೊನಾ ವರದಿ ಇಂದು ಬಂದಿದ್ದು ಅವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಹಾಗೆಯೇ ಜುಲೈ 24 ರಂದು ನಿಧನರಾದ ಕಾಸರಗೋಡು ಮಂಜೇಶ್ವರ ನಿವಾಸಿ ಸೇರಿದಂತೆ ಮೂವರಿಗೂ ಕೂಡಾ ಕೊರೊನಾ ಸೋಂಕು ಇರುವುದು ಇಂದು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಮತ್ತೆ 8 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಮತ್ತೆ 8 ಮಂದಿ ಕೊರೊನಾಗೆ ಬಲಿಯಾಗಿದ್ದು ಈವರೆಗೆ 115 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.