ಕಾಸರಗೋಡು, ಜು 26(DaijiworldNews/PY): ಜಿಲ್ಲೆಯಲ್ಲಿ ಕೊರೊನಾ ವೈರಸ್ಗೆ ಮತ್ತೋರ್ವ ಬಲಿಯಾಗಿದ್ದು, ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಕುಂಬಳೆ ಆರಿಕ್ಕಾಡಿಯ 70 ವರ್ಷದ ವೃದ್ದ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಕೆಲವು ದಿನಗಳ ಹಿಂದೆ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಇವರನ್ನು ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಜು 25ರಂದು ಕಣ್ಣೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಡನ್ನಕ್ಕಾಡ್ನ 75 ವರ್ಷದ ವೃದ್ದೆ ಕೊರೊನಾ ಸೋಂಕಿಗೆ ಬಲಿಯಾಗಿದ್ದರು.