ಮಂಗಳೂರು, ಜು. 26 (DaijiworldNews/MB) : ಕಾರ್ಗಿಲ್ ವಿಜಯ್ ದಿನವಾದ ಜುಲೈ 26 ರ ಭಾನುವಾರದಂದು ಕದ್ರಿ ಯುದ್ಧ ಸ್ಮಾರಕ ಬಳಿ ಹುತಾತ್ಮರ ಸ್ಮಾರಕದಲ್ಲಿ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಲ್ಲಿಸಲಾಯಿತು.










1999ರಲ್ಲಿ ಪಾಕಿಸ್ತಾನ ಸೇನೆಯು ಕಾರ್ಗಿಲ್-ಡ್ರಾಸ್ ವಲಯದಲ್ಲಿ ಅಕ್ರಮವಾಗಿ ನುಗ್ಗಿ ಭಾರತದ ಪ್ರಾಂತ್ಯಗಳನ್ನು ವಶಕ್ಕೆ ಪಡೆದಿತ್ತು. ಈ ಸಂದರ್ಭದಲ್ಲಿ ಭಾರತದ ಮೇಲೆ ಆಕ್ರಮಣ ಮಾಡಲು ಬಂದ ಪಾಕ್ ಸೇನೆಯ ವಿರುದ್ಧ ಮೇ ಯಿಂದ ಆರಂಭವಾಗಿ ಎರಡೂವರೆ ತಿಂಗಳ ಕಾಲ ಕಾರ್ಗಿಲ್ನಲ್ಲಿ ಯುದ್ಧ ನಡೆದಿದ್ದು ಜುಲೈ 29, 1999ರಂದು ಪಾಕ್ ಸೇನೆಯನ್ನು ಹಿಮ್ಮೆಟ್ಟಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಯಿತು. ಈ ಯುದ್ಧದಲ್ಲಿ ಹುತಾತ್ಮರಾದ ವೀರಯೋಧರನ್ನು ನೆನೆಯಲು ಪ್ರತಿವರ್ಷ ಜುಲೈ 26ನ್ನು ಕಾರ್ಗಿಲ್ ವಿಜಯ ದಿನವಾಗಿ ಆಚರಿಸಲಾಗುತ್ತಿದೆ.
ನಗರದಲ್ಲಿಯು ಜುಲೈ 26ನ್ನು ಕಾರ್ಗಿಲ್ ವಿಜಯ ದಿನವನ್ನು ಆಚರಿಸಲಾಗಿದ್ದು ದಕ್ಷಿಣ ಕನ್ನಡದ ಮಾಜಿ ಸೈನಿಕರ ಸಂಘ ಮತ್ತು ಮಂಗಳೂರಿನ ಲಯನ್ಸ್ ಕ್ಲಬ್ ಈ ಕಾರ್ಯಕ್ರಮವನ್ನು ಆಯೋಜಿಸಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ರೂಪಾ ಎಂ ಜೆ ಅವರು ಹುತಾತ್ಮರಿಗೆ ಗೌರವ ಸಲ್ಲಿಸಿ, ಇಂದಿನ ಯುವ ಪೀಳಿಗೆ ಕಾರ್ಗಿಲ್ ಯುದ್ಧದಲ್ಲಿ ಭಾರತೀಯ ಸೈನಿಕರ ಧೈರ್ಯ, ತ್ಯಾಗ ಮತ್ತು ಬಲಿದಾನವನ್ನು ತಿಳಿದು ಕೊಳ್ಳಬೇಕು ಎಂದು ಹೇಳಿದ್ದಾರೆ.
ಮಾಜಿ ಎಂಎಲ್ಸಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮಾಜಿ ಸೈನಿಕರ ಸಂಘದ ಅಧ್ಯಕ್ಷ ನಿಟ್ಟೆಗುತ್ತು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಭಂಡಾರಿ, ಲಯನ್ಸ್ ಕ್ಲಬ್ ಅಧ್ಯಕ್ಷ ಕೃಷ್ಣನಂದಾ ಪೈ ಮತ್ತು ನಂದಗೋಪಾಲ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ವೀರ ಯೋಧರಿಗೆ ಗೌರವ ಸಲ್ಲಿಸಿದರು.
ಭಾನುವಾರದ ಕೊರೊನಾ ಲಾಕ್ಡೌನ್ ಇರುವ ಕಾರಣದಿಂದ ಕೆಲವೇ ಜನರು ಮಾತ್ರ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು.