ಉಡುಪಿ, ಜು 26 (DaijiworldNews/PY): ಜಿಲ್ಲೆಯಲ್ಲಿ ಭಾನುವಾರ ಕೊರೊನಾ ಇಬ್ಬರು ಬಲಿಯಾಗಿದ್ದು, ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಬೈಂದೂರಿನ 62 ಪ್ರಾಯದ ವ್ಯಕ್ತಿ ಹಾಗೂ ಉಡುಪಿಯ ಇಂದಿರಾ ನಗರದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಮೃತಪಟ್ಟವರಲ್ಲಿ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಬೈಂದೂರಿನ 62 ವರ್ಷ ಪ್ರಾಯದ ವ್ಯಕ್ತಿ ನಿನ್ನೆ ರಾತ್ರಿ ಸಾವನ್ನಪ್ಪಿದ್ದರೆ, ಉಡುಪಿಯ ಇಂದಿರಾ ನಗರದ ವೃದ್ದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಕೊರೊನಾ ಮಾರ್ಗಸೂಚಿಯಂತೆ ಮೃತರ ಅಂತ್ಯ ಕ್ರಿಯೆ ನಡೆದಿದೆ.