ಕುಂದಾಪುರ, ಜು. 27 (DaijiworldNews/MB) : ತಾಲ್ಲೂಕಿನ ಹೆಮ್ಮಾಡಿ ಗ್ರಾಮದ ಸುಲ್ಸೆ ಕ್ರಾಸ್ ಬಳಿ ಶನಿವಾರ ಸಂಭವಿಸಿದ ಅಪಘಾತದಲ್ಲಿ ಬೈಕ್ನ ಹಿಂಬದಿ ಸವಾರ ಸಾವನ್ನಪ್ಪಿದ್ದಾನೆ.

ಮೃತನನ್ನು ಮಾಧವ (45) ಎಂದು ಗುರುತಿಸಲಾಗಿದೆ.
ಅನ್ನಪ್ಪ ಎಂಬ ವ್ಯಕ್ತಿ ಬೈಕ್ ಚಲಾಯಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಕಂಬವೊಂದಕ್ಕೆ ಡಿಕ್ಕಿ ಹೊಡೆಯಲಿದ್ದು ಈ ಸಂದರ್ಭದಲ್ಲಿ ಚಾಲಕ ಬೈಕ್ನ್ನು ನಿಲ್ಲಿಸಲು ಪ್ರಯತ್ನಿಸಿದ್ದು ಸ್ಕಿಡ್ ಆಗಿ ಹಿಂಬದಿ ಸವಾರ ಸಾವನ್ನಪ್ಪಿದ್ದಾರೆ.
ಈ ಕುರಿತು ಸಂಚಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.