ಉಡುಪಿ, ಜು 27(DaijiworldNews/SM): ಜಿಲ್ಲೆಯಲ್ಲಿ ಇದೀಗ ಮತ್ತೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಸೋಮವಾರದಂದು ಮತ್ತೆ 225 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3613ಕ್ಕೆ ಏರಿಕೆಯಾಗಿದೆ. ಈ ಪೈಕಿ 1415 ಮಂದಿ ಸದ್ಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ 2184 ಮಂದಿ ಜಿಲ್ಲೆಯಲ್ಲಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.