ಮಂಗಳೂರು, ಜು. 28 (DaijiworldNews/MB) : ರಾಷ್ಟ್ರೀಯ ಹೆದ್ದಾರಿ 66 ರ ಎಕ್ಕೂರು ಬಳಿ ಕಾಸರಗೋಡು ಕಡೆಗೆ ಸಾಗುತ್ತಿದ್ದ ಸಿಮೆಂಟ್ ಲೋಡ್ ಇದ್ದ ಲಾರಿಗೆ, ಬೆಳಗಾಂನಿಂದ ಸಕ್ಕರೆ ಸಾಗಾಟ ನಡೆಸುತ್ತಿದ್ದ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದು ಸಕ್ಕರೆ ಲಾರಿಯ ಚಾಲಕ ಪವಾಡ ಸದೃಶ ಪಾರಾಗಿದ್ದಾರೆ.




ಮುಂದೆ ಇದ್ದ ಸಿಮೆಂಟ್ ಟ್ರಕ್ನ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದರಿಂದ ಹಿಂದುಗಡೆಯಿದ್ದ ಲಾರಿಯು ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇನ್ನು ಟ್ರಾಫಿಕ್ ಪೊಲೀಸರು ಅಪಘಾತದ ಸ್ಥಳಕ್ಕೆ ತೆರಳಿ ವಾಹನಗಳ ಸುಗಮ ವಾಹನ ಸಂಚಾರಕ್ಕೆ ಕಾರ್ಯಾಚರಿಸುತ್ತಿದ್ದಾರೆ.