ಮಂಗಳೂರು, ಜು 28 (Daijiworld News/MSP): ದಿಡೀರ್ ಬೆಳವಣಿಗೆ ಎಂಬಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದ್ದು ಅವರ ಸ್ಥಾನಕ್ಕೆ ಬೆಳಗಾವಿಯ ಜಿಲ್ಲಾ ಪಂಚಾಯತ್ ಸಿ.ಇ ಓ ಆಗಿದ್ದ ಡಾ. ರಾಜೇಂದ್ರ ಕೆ.ವಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.

ಸಿಂಧೂ ರೂಪೇಶ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ -ಆಡಳಿತ ವಿಭಾಗದ ನಿರ್ದೆಶಕಿಯನ್ನಾಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.
ಡಾ. ರಾಜೇಂದ್ರ ಕೆ.ವಿ ಅವರು ಈ ಹಿಂದೆ ಪುತ್ತೂರಿನಲ್ಲಿ ಸಹಾಯಕ ಕಮೀಷನರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.