ಉಡುಪಿ, ಜು. 31 (DaijiworldNews/SM): ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ಶುಕ್ರವಾರದಂದು ಮತ್ತೆ 213 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ.

ಇಂದಿನ ಸೋಂಕಿತರ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4356ಕ್ಕೆ ಏರಿಕೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ 1805 ಸಕ್ರಿಯ ಪ್ರಕರಣಗಳಿವೆ. ಉಳಿದಂತೆ ಜಿಲ್ಲೆಯಲ್ಲಿ ಒಟ್ಟು 2522 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಈ ನಡುವೆ ಕೋವಿಡ್ ನಿಂದಾಗಿ ಉಡುಪಿಯಲ್ಲಿ ಈವರೆಗೆ 29 ಮೃತಪಟ್ಟಿದ್ದಾರೆ. 562 ಮಂದಿಯ ವರದಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.