ಬ್ರಹ್ಮಾವರ, ಆ 1 (Daijiworld News/MSP): ದ್ವಿಚಕ್ರ ವಾಹನ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜು.31 ರ ಶುಕ್ರವಾರ ತಡರಾತ್ರಿ ಉಡುಪಿಯ ಬ್ರಹ್ಮಾವರ ಸಮೀಪದ ಕೆಜಿ ರೋಡ್ ಬಳಿ ಸಂಭವಿಸಿದೆ.


ಮೃತ ಯುವಕನ್ನು ಗರಡಿ ಮಜಲ್ ನಿವಾಸಿ ಪ್ರವೀಣ್ (24) ಎಂದು ಗುರುತಿಸಲಾಗಿದೆ. ದ್ವಿಚಕ್ರ ಸವಾರ ಡಿವೈಡರ್ ಮೇಲಿನಿಂದ ರಸ್ತೆ ದಾಟಲು ಪ್ರಯತ್ನಿಸುತ್ತಿದ್ದ ವೇಳೆ ಮತ್ತೊಂದು ಬದಿಯಲ್ಲಿ ಬಂದ ಬೆಲೋನಾ ಕಾರು ಅಚಾನಕ್ ಆಗಿ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬ್ರಹ್ಮಾವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.