ಉಡುಪಿ, ಆ. 01 (DaijiworldNews/MB) : ಉಡುಪಿಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿದ್ದು ಶನಿವಾರ 136 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4492 ಕ್ಕೆ ಏರಿಕೆಯಾಗಿದೆ.

ಶನಿವಾರ ಲಭಿಸಿದ ವರದಿಯಲ್ಲಿ 136 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು 716 ವರದಿ ನೆಗೆಟಿವ್ ಆಗಿದೆ. ಇನ್ನು ಕೂಡಾ 446 ವರದಿಗಳು ಲಭಿಸಬೇಕಾಗಿದೆ.
ಜಿಲ್ಲೆಯಲ್ಲಿ ಈವರೆಗೆ ಕೊರೊನಾಗೆ 35 ಮಂದಿ ಬಲಿಯಾಗಿದ್ದಾರೆ. ಹಾಗೆಯೇ 2646 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.