ಮಂಗಳೂರು, ಆ. 02 (DaijiworldNews/MB) : ಕೊರೊನಾ ಸೋಂಕು ದೃಢಪಟ್ಟ ವಿಧಾನ ಪರಿಷತ್ನ ಮಾಜಿ ಸದಸ್ಯ ಐವನ್ ಡಿಸೋಜಾ ಅವರ ಪ್ರಾಥಮಿಕ ಸಂಪರ್ಕವನ್ನು ಹೊಂದಿದ್ದ ಕಾರಣದಿಂದಾಗಿ ಶಾಸಕ ಯುಟಿ ಖಾದರ್ ಅವರು ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.

ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮೂಲಕ ತಿಳಿಸಿದ್ದು, ''ಮಾಜಿ ಶಾಸಕ ಐವನ್ ಡಿಸೋಜಾ ಹಾಗೂ ಲಕ್ಷಾಂತರ ಮಂದಿ ಕೋವಿಡ್ ಸೋಂಕಿತರಾಗಿರಾಗಿದ್ದಾರೆ. ಇವರೆಲ್ಲರೂ ಶೀಘ್ರದಲ್ಲೇ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಕೆಲ ದಿನಗಳಿಂದ ಐವನ್ ಡಿಸೋಜಾ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾರಣ ನಾನು ಕೆಲವು ದಿನಗಳ ಕಾಲ ಸ್ವಯಂ ನಿರ್ಬಂಧ ಹಾಕಿಕೊಂಡಿದ್ದೇನೆ'' ಎಂದು ಹೇಳಿದ್ದಾರೆ.
''ಹೀಗಾಗಿ ಇಂದು ನಿಗದಿಯಾಗಿದ್ದ ಜನ ಸಮಾನ್ಯರ ಭೇಟಿ, ಕ್ಷೇತ್ರದ ಅಭಿವೃದ್ದಿ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆಗಿನ ಸಭೆ, ಕ್ಷೇತ್ರದಲ್ಲಿ ನಿಗದಿಯಾಗಿದ್ದ ವಿವಿಧ ಕಾರ್ಯಕ್ರಮಗಳು ಮುಂದೂಡಲ್ಪಟ್ಟಿದ್ದೆ.ಜನ ಸಾಮಾನ್ಯರ ಸೇವೆಗೆ ದೂರವಾಣಿ ಮೂಲಕ ಲಭ್ಯವಿದ್ದು ಅಗತ್ಯವಿದ್ದಲ್ಲಿ ನೇರವಾಗಿ ದೂರವಾಣಿ ಮೂಲಕ ನನ್ನನ್ನ ಎಂದಿನಂತೆ ಸಂಪರ್ಕಿಸಬಹುದಾಗಿದೆ'' ಎಂದು ತಿಳಿಸಿದ್ದಾರೆ.
''ಇದೇ ವೇಳೆ ಐವನ್ ಡಿಸೋಜಾ ಜೊತೆಗೆ ಪ್ರಾಥಮಿಕ ಸಂಪರ್ಕಿತದಲ್ಲಿದ್ದವರು ಕೆಮ್ಮು ಜ್ವರ ಮುಂತಾದ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡುತ್ತೇನೆ'' ಎಂದು ಹೇಳಿದ್ದಾರೆ.