ಉಡುಪಿ, ಆ 02 (DaijiworldNews/PY): ಅಯೋಧ್ಯೆಯಲ್ಲಿ ಆಗಸ್ಟ್ 5ರಂದು ನಡೆಯುವ ರಾಮ ಮಂದಿರದ ಭೂಮಿ ಪೂಜೆ ಕ್ಷಣಗಣನೆ ಆರಂಭವಾಗಿದ್ದು, ಈ ಹಿನ್ನೆಲೆ ಸೋದೆ ಕ್ಷೇತ್ರದಿಂದ ಅಯೋಧ್ಯೆಗೆ ಧವಳಗಂಗಾ ತೀರ್ಥ ಹಾಗೂ ಮೃತ್ತಿಕೆಯನ್ನು ಕಳುಹಿಸಲಾಗಿದೆ.

ಧವಳಗಂಗಾ ತೀರ್ಥ ಹಾಗೂ ಕ್ಷೇತ್ರದ ಮೃತ್ತಿಕೆಗೆ ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥರು ಪೂಜೆ ಸಲ್ಲಿಸಿ ಅಯೋಧ್ಯೆಗೆ ಕಳುಹಿಸಿಕೊಟ್ಟಿದ್ದಾರೆ.
ಆಗಸ್ಟ್ 5 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 12.30 ರ ನಡುವೆ ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆ ನಡೆಯಲಿದ್ದು, ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸೇರಿದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಹಾಗೂ ಹಲವಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ.