ಕಾಸರಗೋಡು, ಆ 02 (DaijiworldNews/PY): ಜಿಲ್ಲೆಯಲ್ಲಿ ಆಗಸ್ಟ್ 6ರವರೆಗೆ ಭಾರೀ ಮಳೆ ಸುರಿಯಲಿದ್ದು, ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನಲೆ ಕೇರಳದಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಮಳೆಯ ಮುನ್ನೆಚ್ಚರಿಕೆ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ತಗ್ಗು ಪ್ರದೇಶದ ಜನರು ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು . ಪ್ರವಾಹ, ಭೂಕುಸಿತ ಉಂಟಾಗುವ ಸಾಧ್ಯತೆ ಮನಗಂಡು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.