ಮಂಗಳೂರು, ಆ. 03, (DaijiworldNews/SM): ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸಿಎಂ ಭೇಟಿಯಾಗಿದ್ದ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರು ಸ್ವಯಂ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಮುಖ್ಯಮಂತ್ರಿಯವರಲ್ಲಿ ಸೋಂಕು ದೃಢಪಟ್ಟ ಬಳಿಕ ಅವರ ಸಂಪರ್ಕಕ್ಕೆ ಬಂದಿರುವವರು ಕ್ವಾರಂಟೈನ್ ಗೆ ಒಳಗಾಗುವಂತೆ ಸಿಎಂ ಸೂಚಿಸಿದ್ದರು. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರು ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದರು. ಸಭೆಯಲ್ಲಿ ಭಾಗವಹಿಸಿದ್ದರು. ಈ ಕಾರಣದಿಂದಾಗಿ ಮುಂಜಾಗೃತ ಕ್ರಮವಾಗಿ ಅವರು ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಇನ್ನು ಜುಲೈ 30ರಂದು ಸಚಿವರು ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದರು. ಇದೀಗ ತಮ್ಮ ಸ್ವಂತ ನಿವಾಸದಲ್ಲಿ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.