ಉಡುಪಿ, ಆ. 04 (DaijiworldNews/SM): ಜಿಲ್ಲೆಯಲ್ಲಿ ಮತ್ತೆ 170 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 4970ಕ್ಕೆ ಏರಿಕೆಯಾಗಿದೆ.

ಈವರೆಗೆ ಜಿಲ್ಲೆಯಲ್ಲಿ 2938 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 1980 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾದಿಂದಾಗಿ ಉಡುಪಿಯಲ್ಲಿ ಈವರೆಗೆ 42 ಮಂದಿ ಸಾವನ್ನಪ್ಪಿದ್ದಾರೆ.
ಸದ್ಯ 704 ಮಂದಿಯ ವರದಿ ಬರಲು ಬಾಕಿ ಇದ್ದು, ಮಂಗಳವಾರದಂದು 1352 ಮಂದಿಯ ವರದಿ ನೆಗೆಟಿವ್ ಆಗಿದೆ.