ಮಂಗಳೂರು, ಆ. 04 (DaijiworldNews/SM): ಆಗಸ್ಟ್ 5 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಯಲಿದ್ದು, ಈ ಹಿನ್ನೆಲೆ ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಆಗಸ್ಟ್ 4ರ ರಾತ್ರಿ 8 ಘಂಟೆಯಿಂದ ಆಗಸ್ಟ್ 6ರ ಬೆಳಿಗ್ಗೆ 6 ಗಂಟೆಯ ತನಕ ಉಡುಪಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ನೀಡಿದ್ದಾರೆ. ಇನ್ನು ದ.ಕ. ಜಿಲ್ಲೆಯಲ್ಲೂ ಕೂಡ ಇದೇ ಸಮಯದಲ್ಲಿ ಮದ್ಯ ಮಾರಾಟ ನಿಷೇಧಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ.
ರಾಮ ಮಂದಿರ ನಿರ್ಮಾಣದ ಸಂದರ್ಭದಲ್ಲಿ ಉಭಯ ಜಿಲ್ಲೆಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ಸಮಯದಲ್ಲಿ ಉಭಯ ಜಿಲ್ಲೆಗಳಲ್ಲಿ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳು ಬಂದ್ ಇರಲಿವೆ.