ಮಂಗಳೂರು, ಆ. 04 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು ಮತ್ತೆ 225 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6618ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಮಂಗಳವಾರದಂದು ಮತ್ತೆ 73 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಈ ನಡುವೆ ಮತ್ತೆ ನಾಲ್ವರು ಕೊರೊನಾದಿಂದಾಗಿ ಜಿಲ್ಲೆಯಲ್ಲಿ ಸಾವನ್ನಪ್ಪಿದ್ದಾರೆ. 3138 ಮಂದಿ ಸದ್ಯ ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2927 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 180 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಜಿಲ್ಲೆಯಲ್ಲಿ 67 ಐ ಎಲ್ ಐ ಪ್ರಕರಣಗಳು ಪತ್ತೆಯಗಿವೆ. 20 ಸಾರಿ ಪ್ರಕರಣಗಳಾಗಿವೆ. 60 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 77 ಮಂದಿಯ ಸೋಂಕಿನ ಮೂಲವನ್ನು ಪತ್ತೆಹಚ್ಚಲಾಗುತ್ತಿದೆ. ಒಬ್ಬರಲ್ಲಿ ಅಂತರಾಷ್ಟ್ರೀಯ ಪ್ರಯಾಣ ಮುಗಿಸಿ ಬಂದವರಲ್ಲಿ ಸೋಂಕು ಪತ್ತೆಯಾಗಿದೆ.