ಉಡುಪಿ ಆ. 05 (DaijiworldNews/SM): ಜಿಲ್ಲೆಯಲ್ಲಿ ಮತ್ತೆ 173 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 5141ಕ್ಕೆ ಏರಿಕೆಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಕಾರಣದಿಂದಾಗಿ ಬುಧವಾರದಂದು ಮತ್ತೆ ಇಬ್ಬರು ಸಾವನ್ನಪ್ಪಿದ್ದಾರೆ. 72 ವರ್ಷದ ಪುರುಷ ಮತ್ತು 55 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 44ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಬುಧವಾರ ಮತ್ತೆ 124 ಮಂದಿ ಗುಣಮುಖರಾಗಿ ಡಿಸ್ವಾರ್ಜ್ ಆಗಿದ್ದಾರೆ. ಸದ್ಯ ಉಡುಪಿಯಲ್ಲಿ 2027 ಸಕ್ರಿಯ ಪ್ರಕರಣಗಳಿವೆ.