ಮಂಗಳೂರು, ಆ. 08 (DaijiworldNews/SM): ದ.ಕ. ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.

ಹರೀಶ್ ಪೂಂಜಾ ಅವರು ಇತ್ತೀಚಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಈ ಕಾರಣದಿಂದಾಗಿ ಮಂಗಳೂರಿನಲ್ಲಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದರು. ಇದರೊಂದಿಗೆ ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದರು. ಇದೀಗ ವರದಿ ಲಭ್ಯವಾಗಿದ್ದು, ಪಾಸಿಟಿವ್ ಎಂಬುವುದಾಗಿ ದೃಢಪಟ್ಟಿದೆ.
ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಶಾಸಕ ಹರೀಶ್ ಪೂಂಜಾ ಸಣ್ಣ ಮಟ್ಟಿನ ಜ್ವರ ಇದ್ದ ಕಾರಣ ಕೊರೊನಾ ಪರೀಕ್ಷೆ ಮಾಡಿಸಿದ್ದೆ. ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಸಣ್ಣ ಜ್ವರ ಹೊರತುಪಡಿಸಿ ಇತರ ಯಾವುದೇ ಲಕ್ಷಣಗಳು ಇಲ್ಲದ ಹಿನ್ನೆಲೆಯಲ್ಲಿ, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಇತೀಚಿಗೆ ನನ್ನು ಭೇಟಿಯಾದವರು ಕ್ವಾರಂಟೈನ್ ನಲ್ಲಿದ್ದು ಮುನ್ನೆಚ್ಚರಿಕೆ ವಹಿಸುವಂತೆ ಶಾಸಕರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
