ಮಂಗಳೂರು, ಆ. 06 (DaijiworldNews/MB) : ಮಾಲ್ಗಳು, ಅಂಗಡಿಗಳು ಮತ್ತು ಮಾರುಕಟ್ಟೆಗಳಿಗೆ ಭೇಟಿ ನೀಡುವ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಹೆಚ್ಚುತ್ತಿರುವ ಸಾಂಕ್ರಾಮಿಕದ ಮಧ್ಯೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅಗತ್ಯತೆಯ ಬಗ್ಗೆ ಮಂಗಳೂರು ನಗರದ 60 ವಾರ್ಡ್ಗಳಲ್ಲಿ ಜಾಗೃತಿ ಅಭಿಯಾನಗಳನ್ನು ನಡೆಸಲು ಅಧಿಕಾರಿಗಳನ್ನು ನಿಯೋಜಿಸುವಂತೆ ಅವರು ನಿಗಮ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.
ಹಾಗೆಯೇ ಈ ಆದೇಶಗಳನ್ನು ಉಲ್ಲಂಘಿಸಿದ್ದಲ್ಲಿ ದಂಡ ವಿಧಿಸಲಾಗುವುದು ಹಾಗೂ ನೋಟಿಸ್ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.