ಉಡುಪಿ, ಆ. 06 (DaijiworldNews/SM): ಜಿಲ್ಲೆಯಲ್ಲಿ 217 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ5353 ಕ್ಕೆ ಏರಿಕೆಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ಇಲ್ಲಿಯ ತನಕ 1685 ಮಂದಿಯ ವರದಿ ನೆಗೆಟಿವ್ ಆಗಿದೆ. ಗುರುವಾರ 85 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಕೊರೊನಾದಿಂದ ಗುರುವಾರ ಉಡುಪಿ ಜಿಲ್ಲೆಯಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಆ ಮೂಲಕ ಮರಣ ಹೊಂದಿದವರ ಒಟ್ಟು ಸಂಖ್ಯೆ 50ಕ್ಕೆ ಏರಿಕೆಯಾಗಿದೆ.
ಉಡುಪಿಯ 82 ವರ್ಷದ ಮಹಿಳೆ, 55 ವರ್ಷದ ವ್ಯಕ್ತಿ, ಕುಂದಾಪುರ ತಾಲೂಕಿನ 52 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಕಾರ್ಕಳ ತಾಲೂಕಿನ 75 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಉಡುಪಿ ತಾಲ್ಲೂಕಿನ 36 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಹೃದಯ ಸಂಬಂಧಿ ಕಾಯಿಲೆ ಹೊಂದಿದ್ದ 75 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ.