ಮಂಗಳೂರು, ಏ 23: ನಗರದ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾದ ಜೆ.ಆರ್ ಲೋಬೋ ಇಂದು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

.jpg)
.jpg)




ಮಂಗಳೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಜೆ.ಆರ್ ಲೋಬೋ ನಾಮಪತ್ರ ಸಲ್ಲಿಸುವ ಮುನ್ನ ಬೆಳಿಗ್ಗೆ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ, ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಸಂದರ್ಭ ಅಪಾರ ಬೆಂಬಲಿಗರು ಶಾಸಕರ ಜೊತೆಗೆ ಇದ್ದು ಸಹಕಾರ ನೀಡಿದ್ದಾರೆ.
ಎರಡನೇ ಬಾರಿಗೆ ನಾಮಪತ್ರ ಸಲ್ಲಿಸಲಿರುವ ಶಾಸಕ ಲೋಬೋ ಅವರು ಇಂದು ಮುಂಜಾನೆಯಿಂದಲೇ ಚರ್ಚ್, ದೇವಸ್ಥಾನ, ಮಸೀದಿಗೆ ಭೇಟಿ ನೀಡಿ ತನ್ನ ಗೆಲುವಿಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಕದ್ರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ ಹಾಗೂ ಬಿಕರ್ಣಕಟ್ಟೆ ಬಾಲಯೇಸು ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.