ಉಡುಪಿ, ಆ 07 (DaijiworldNews/PY): ಉಡುಪಿ ಜಿಲ್ಲೆಗೆ ಪ್ರಾಕೃತಿಕ ವಿಕೋಪ ನಿಧಿಗೆ 5 ಕೋಟಿ.ರೂ ಬಿಡುಗಡೆ ಮಾಡಲಾಗುವುದು. ಪಾಕೃತಿಕ ವಿಕೋಪ ಪುನರ್ವಸತಿ ಭವನ ನಿರ್ಮಾಣಕ್ಕೆ ರಾಜ್ಯದ ಕರಾವಳಿಗೆ ತಲಾ 10 ಕೋಟಿ. ರೂ ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.







ಪಡುಬಿದ್ರಿಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲಾ ಪರಿಹಾರ ನಿಧಿಯಲ್ಲಿ ಈಗಾಗಲೇ 3.5 ಕೋ.ರೂ.ಇದೆ. ಕಡಲ್ಕೊರೆತ ತಡೆಗಟ್ಟಲು ಪಡುಬಿದ್ರಿ ಬೀಚ್ನಲ್ಲಿ ಶಾಶ್ವತ ಕಾಂಕ್ರೀಟ್ ತಡೆಗೋಡೆ ನಿರ್ಮಾಣ ಮಾಡಲಾಗುವುದು. ಈ ಕುರಿತು ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಧಿಕಾರಿಗೆ ತಿಳಿಸಿದ್ದೇನೆ. ಇದು ಪ್ರಸ್ತಾವನೆ ಸ್ವೀಕರಿಸಿದ ನಂತರ ಯೋಜನೆಗಾಗಿ 5 ಕೋ.ರೂ ಮಂಜೂರು ಮಾಡಲಾಗುವುದು ಎಂದು ತಿಳಿಸಿದರು.
ಎನ್ಡಿಆರ್ಎಫ್ಗೆ ಕೆಂದ್ರ ಸರ್ಕಾರ ಹೆಚ್ಚುವರಿಯಾಗಿ ಹಣ ಮಂಜೂರು ಮಾಡಿದೆ. ಪಡುಬಿದ್ರಿ ಬೀಚ್ ಅನ್ನು ಪ್ರವಾಸಿ ತಾಣವನ್ನಾಗಿ ಮಾಡುವ ಪ್ರಸ್ತಾಪವನ್ನು ಹಿಂಪಡೆಯಲಾಗುವುದು. ಈ ಪ್ರದೇಶವನ್ನು ಹಾಳು ಮಾಡುವುದಿಲ್ಲ. ಈ ವಿಚಾರವಾಗಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರೊಂದಿಗೆ ಚರ್ಚಿಸುತ್ತೇನೆ. ಮಳೆಗಾಲದಲ್ಲಿ ರಕ್ಷಣಾ ಕಾರ್ಯಚರಣೆ ನಡೆಸಲು ಕಷ್ಟವಾಗಿದೆ ಎನ್ನುವ ವಿಚಾರ ತಿಳಿದಿದೆ ಎಂದರು.
ಕೊಡಗು ಜಿಲ್ಲೆಯನ್ನು ಹೊರತುಪಡಿಸಿ ಜಿಲ್ಲೆಯ ಇತರ ಸ್ಥಳಗಳಲ್ಲಿ ದುರಂತದ ಪರಿಸ್ಥಿತಿಗಳನ್ನು ಎದುರಿಸುತ್ತಿರುವಂತೆ ಕಾಣುತ್ತಿಲ್ಲ. ಈ ಮೊದಲೂ ಕೂಡಾ ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಸಂದರ್ಭ ಏನಾಗಿತ್ತು ಎನ್ನುವುದನ್ನು ನಾವು ತಿಳಿದುಕೊಂಡಿದ್ದು, ಮೂರು ತಿಂಗಳ ಹಿಂದೆಯೇ ನಾವು ಅವರಿಗೆ ಮುನ್ಸೂಚನೆ ನೀಡಿದ್ದೆವು. ಆದರೆ, ದುರಾದೃಷ್ಟವಶಾತ್ ಅವರು ನಮ್ಮ ಮಾತಿನತ್ತ ಗಮನಹರಿಸಿಲ್ಲ. ಈಗ ಪರಿಸ್ಥಿತಿ ಕಠೋರವಾಗಿದೆ ಎಂದರು.
ರಾಜ್ಯ ಸರ್ಕಾರ ಅಗ್ನಿಶಾಮಕ ಇಲಾಖೆಗೆ 20 ಕೋ.ರೂ ಮಂಜೂರು ಮಾಡಿದೆ. ಹಿಂದಿನ ವರ್ಷಕ್ಕಿಂತ ಉತ್ತಮ ಸೌಲಭ್ಯಗಳನ್ನು ಕಲ್ಪಿಸುವುದು ಇದರ ಉದ್ದೇಶವಾಗಿದೆ. ರಾಜ್ಯದ ವಿವಿಧ ಜಿಲ್ಲಾಧಿಕಾರಿಗಳೊಂದಿಗೆ ಸಭೆ ಹಾಗೂ ಚರ್ಚೆ ನಡೆಸಲಾಗಿದೆ. ಪ್ರಕೃತಿಯ ವಿಕೋಪವನ್ನು ಎದುರಿಸಲು, ಪೊಲೀಸ್, ಅಗ್ನಿಶಾಮಕ ಮತ್ತು ಕಂದಾಯ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲಿವೆ. ಎಲ್ಲಾ ಇಲಾಖಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಜಾಗರೂಕತೆಯನ್ನು ಕಾಪಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಶೀಘ್ರದಲ್ಲೇ ಪರಿಸ್ಥಿತಿ ಸಹಜ ಸ್ಥಿತಿಗೆ ಬರಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಹೇಳಿದರು.
ಆಗಸ್ಟ್ 7 ಮತ್ತು 8 ರಂದು ಮಂಗಳೂರು, ಉಡುಪಿ ಮತ್ತು ಕಾರಾವಾರ ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ ಅಶೋಕ್ ತಿಳಿಸಿದರು.
ಬಸವರಾಜ್ ಬೊಮ್ಮಾಯಿ ಅವರು ನನಗಿಂತ ಹೆಚ್ಚು ಸಕ್ರಿಯರಾಗಿದ್ದಾರೆ. ಅವರು ಕೂಡಾ ಕೆಲವು ಸ್ಥಳಗಳಿಗೆ ಭೇಟಿ ನೀಡುತ್ತಿದ್ದು, ಆ ಪ್ರದೇಶಗಳಲ್ಲಿನ ಅಭಿವೃದ್ಧಿಯನ್ನು ಪರಿಶೀಲಿಸುತ್ತಿದ್ದಾರೆ ಎಂದು ಹೇಳಿದರು.
ಡಿಸಿ ಜಿ ಜಗದೀಶ್, ಮಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗಡೆ, ಕಾಪು ತಹಶೀಲ್ದಾರ್ ಮೊಹಮ್ಮದ್ ಇಸಾಕ್, ಎಸ್ಪಿ ವಿಷ್ಣುವರ್ಧನ್ ಮತ್ತು ಇತರರು ಉಪಸ್ಥಿತರಿದ್ದರು.