ಉಡುಪಿ, ಆ. 07 (DaijiworldNews/SM): ಜಿಲ್ಲೆಯಲ್ಲಿ ಶುಕ್ರವಾರದಂದು 245 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ನಡುವೆ 1148 ಮಂದಿಯ ಕೊರೊನಾ ವರದಿ ನೆಗೆಟಿವ್ ಆಗಿದೆ.

ಶುಕ್ರವಾರ ಐವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಉಡುಪಿಯಲ್ಲಿ 2292 ಸಕ್ರಿಯ ಕೊರೊನಾ ಕೇಸ್ ಗಳಿವೆ. ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 5606 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈವರೆಗೆ 3258 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ.
ಉಡುಪಿಯಲ್ಲಿ ಒಟ್ಟು 55 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.