ಕಾರ್ಕಳ, ಆ. 08 (DaijiworldNews/MB) : ಪಶ್ಚಿಮ ಘಟ್ಟದಲ್ಲಿ ಕಳೆದ ಕೆಲ ದಿನಗಳಿಂದಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸ್ವರ್ಣ ನದಿ ತುಂಬಿ ಹರಿಯುತ್ತಿದೆ. ತುಂಬಿ ಹರಿಯುತ್ತಿರುವ ಸ್ವರ್ಣ ನದಿಯ ದೃಶ್ಯಾವಳಿ ಕಣ್ತುಂಬಿಕೊಳ್ಳಲು ಜನರು ಆಗಮಿಸುತ್ತಿರುವುದು ಕಂಡು ಬಂದಿದೆ.


ಪಶ್ಚಿಮಘಟ್ಟದಲ್ಲಿ ತಪಲು ತೀರಾ ಪ್ರದೇಶದಿಂದ ಉಗಮವಾಗುವ ಸ್ವರ್ಣ ನದಿ ಮಾಳ ಗ್ರಾಮದ ಮಲ್ಲಾರು, ಮುಳ್ಳೂರು, ಪಟ್ಟಣಹಿತ್ಲು, ಹೇರಂಜೆ,ಕಲ್ಯಾಣಿ, ಎಡಪ್ಪಾಡಿ, ಹೊಯ್ಗೆಹಿತ್ಲು, ಹೆಗ್ಗಡೆಮನೆ ಮತ್ತು ಕಡಂದಲಾಜೆ ಮೊದಲಾದೆಡೆಯ ತೊರೆಗಳು ಪಶ್ಚಿಮಾಭಿಮುಖವಾಗಿ ಹರಿಯುವ ಈ ತೊರೆಗಳೆಲ್ಲವೂ ಕಡಾರಿ(ಮಾಚೊಟ್ಟೆ) ಹೊಳೆಯನ್ನು ಸೇರಿ ಎಣ್ಣೆಹೊಳೆಯನ್ನು ಕೂಡಿಕೊಂಡು ಗ್ರಾಮದ ಹೊರಗಡೆ ಸ್ವರ್ಣ ಎಂಬ ನಾಮಾಂಕಿತದೊಂದಿಗೆ ಪರಿಚಯಿಸಿಕೊಂಡು ಉಡುಪಿಯ ಕಲ್ಯಾಣಪುರದಲ್ಲಿ ಸಮುದ್ರದೊಂದಿಗೆ ಲೀನವಾಗುತ್ತದೆ.
ಸ್ವರ್ಣ ನದಿಗೆ ಬಲ್ಮಗುಂಡಿ(ಮುಂಡ್ಲಿ)ಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಿ ಕಾರ್ಕಳ ಪುರಸಭಾ ವ್ಯಾಪ್ತಿಗೆ ಹಾಗೂ ಹಿರಿಯಡ್ಕ ಬಜೆ ಎಂಬಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಿ ಉಡುಪಿ ಪುರಸಭಾ ವ್ಯಾಪ್ತಿಗೆ ಸಮಗ್ರ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ.