ಉಡುಪಿ, ಆ. 08 (DaijiworldNews/MB) : ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸ್ವರ್ಣ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದು ಪ್ರವಾಹ ಸಂಭವಿಸುವ ಸಾಧ್ಯತೆಯಿದ್ದು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲು ಸನ್ನದ್ಧರಾಗಿರಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಸೂಚನೆ ನೀಡಿದ್ದಾರೆ.

ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು ಎಣ್ಣೆ ಹೊಳೆಯ ಸ್ವರ್ಣ ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿಯಾಗಿ ತೀವ್ರ ಪ್ರವಾಹ ಉಂಟಾಗುವ ಸಾಧ್ಯತೆಯಿದೆ ಎಂದಯ ಕೇಂದ್ರ ಜಲ ಆಯೋಗ ಪ್ರವಾಹ ಮುನ್ಸೂಚನೆ ಮಾನಿಟರಿಂಗ್ ನಿರ್ದೇಶನಾಲಯದ ಪ್ರವಾಹ ನಿಯಂತ್ರಣ ಕೊಠಡಿಯಿಂದ ಮುನ್ಸೂಚನೆ ಬಂದಿರುತ್ತದೆ. ಆದ್ದರಿಂದ ಸ್ವರ್ಣ ನದಿಯ ಬಳಿಯ ಗ್ರಾಮಗಳಲ್ಲಿ ಎಚ್ಚರ ವಹಿಸಿ, ಮುಂಜಾಗೃತಾ ಕ್ರಮ ಕೈಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ತಮ್ಮ ಮೊಬೈಲ್ ಹಾಗೂ ಕಛೇರಿ ದೂರವಾಣಿ ಸಂಖ್ಯೆಯನ್ನು ಸದಾ ಸನ್ನದ್ಧರಾಗಿರಿಸಿಕೊಂಡು ಕೂಡಲೇ ಸ್ಪಂಧಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಹಾಗೆಯೇ ಈ ಬಗ್ಗೆ ಪ್ರವಾಹ ಪರಿಸ್ಥಿತಿ ಮತ್ತು ನಿರ್ವಹಣೆ ಬಗ್ಗೆ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.