ಉಡುಪಿ, ಆ 09 (DaijiworldNews/PY): ಪ್ರವಾಹ ಪೀಡಿತ ಪ್ರದೇಶಗಳಾದ ಬೈಂದೂರು ಹಾಗೂ ನಾವುಂದಕ್ಕೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಭೇಟಿ ನೀಡಿದರು.









ಜಿಲ್ಲೆಯಲ್ಲಿ ಭಾರೀ ಮಳೆಯಾದ ಕಾರಣ ಹೆಚ್ಚು ಹಾನಿಯಾಗಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಉಡುಪಿ, ಕುಂದಾಪುರ, ಕಾರ್ಕಳದ ಅನೇಕ ಪ್ರದೇಶಗಳು ಹಾನಿಗೊಳಗಾಗಿವೆ.
ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಜಿ.ಜಗದೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಕ್ಷಣಾ ಕಾರ್ಯಚರಣೆ ನಿನ್ನೆಯಿಂದಲೇ ಆರಂಭವಾಗಿದ್ದು, ಜನರನ್ನು ಸುರಕ್ಷಿತ ವಲಯಗಳಿಗೆ ಸ್ಥಳಾಂತರಿಸಲಾಗಿದೆ.
ಕುಂದಾಪುರ ರಾಷ್ಟ್ರೀಯ ಹೆದ್ದಾರಿ ಸ್ಥಳಕ್ಕೂ ಡಿಸಿ ಭೇಟಿ ನೀಡಿದ್ದು, ಅಲ್ಲಿ ನೀರಿನ ಹರಿವು ಹೆಚ್ಚಾದ್ದರಿಂದ ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ. ನೀರಿನ ಹರಿವಿಗೆ ತ್ವರಿತವಾಗಿ ವ್ಯವಸ್ಥೆ ಮಾಡುವಂತೆ ಎನ್ಎಚ್ಎಐ ಅಧಿಕಾರಿಗಳಿಗೆ ಸೂಚನೆ ನೀಡಿದರು.