ಮೈಸೂರು,ಏ 24: ಸಿಎಂ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಸಚಿವ ಎಚ್.ಸಿ.ಮಹದೇವಪ್ಪ ಅವರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಮಂಗಳವಾರ ಬೆಳ್ಳಂಬೆಳಗ್ಗೆ ಮೈಸೂರಿನ ವಿಜಯನಗರದಲ್ಲಿರುಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮುಂದುವರಿಸಿದ್ದಾರೆ. ಕರ್ನಾಟದಲ್ಲಿ ವಿಧಾನ ಸಭಾ ಚುನಾವಣೆಯ ಕಾವು ಏರುತ್ತಿರುವಾಗಲೇ ರಾಜ್ಯ ಸರಕಾರದ ಪ್ರಭಾವಿ ಸಚಿವ ಮಹದೇವಪ್ಪ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ಬಿಸಿ ಮುಟ್ಟಿಸಿದ್ದಾರೆ. ಇನ್ನು ದಾಳಿ ಸಂದರ್ಭ ಮಹದೇವಪ್ಪ ಅವರು ಮನೆಯಲ್ಲಿಯೇ ಇದ್ದರೆಂಬ ಮಾಹಿತಿ ಲಭ್ಯವಾಗಿದೆ.