ಮಂಗಳೂರು, ಆ. 09, (DaijiworldNews/SM): ದಕ್ಷಿಣ ಕನ್ನಡದಲ್ಲಿ ರವಿವಾರದಂದು ಮತ್ತೆ 132 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. 195 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಜಿಲ್ಲೆಯಲ್ಲಿ ರವಿವಾರದ ಸೋಂಕಿತರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 7207ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಸದ್ಯ 3305 ಕೊರೋನಾ ಆಕ್ಟಿವ್ ಪ್ರಕರಣಗಳಿವೆ. ರವಿವಾರದಂದು 195 ಮಂದಿ ಗುಣಮುಖರಾಗಿದ್ದು, ಆ ಮೂಲಕ ಒಟ್ಟು ಬಿಡುಗಡೆಯಾದವರ ಸಂಖ್ಯೆ 3682ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ರವಿವಾರ ಮತ್ತೆ 6 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.