ಕಾಸರಗೋಡು, ಆ 10(DaijiworldNews/HR): ಕಾಸರಗೋಡು ಜಿಲ್ಲೆಯವರಿಗೆ ಅಂತರಾಜ್ಯ ಪ್ರಯಾಣಕ್ಕೆ ತಡೆಯೊಡ್ಡಿದ ಕೇರಳ ಸರಕಾರದ ಧೋರಣೆಯನ್ನು ಹಾಗೂ ರಸ್ತೆ ತಡೆಗಟ್ಟಿ ಸಂಚಾರಕ್ಕೆ ತಡೆಯೊಡ್ಡಿದ ಸರಕಾರದ ಕ್ರಮವನ್ನು ಪ್ರಶ್ನಿಸಿ ಕೇರಳ ರಾಜ್ಯ ಉಚ್ಚನ್ಯಾಯಲದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದೆ.

ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯರು, ಜಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷ, ನ್ಯಾಯವಾದಿ ಕೆ ಶ್ರೀಕಾಂತ್ ಅವರು ಕಾಸರಗೋಡು ಜಿಲ್ಲೆಯ ಜನರ ಪರವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ.
ಸೋಮವಾರ ಕೇರಳ ಉಚ್ಚ ನ್ಯಾಯಲಯದ ಮುಖ್ಯ ನ್ಯಾಯಾಧೀಶರ ಮುಂದೆ ಈ ಅರ್ಜಿ ವಿಚಾರಣೆಗೆ ಬರಲಿದೆ ಎಂದು ತಿಳಿದು ಬಂದಿದೆ.