ಉಡುಪಿ, ಆ 10 (Daijiworld News/MSP): ನಗರದ ಸರಕಾರಿ ಆಸ್ಪತ್ರೆಯ ಮುಂಭಾಗ ತ್ಯಾಜ್ಯದ ಡಬ್ಬಿಗೆ ನವಜಾತ ಹೆಣ್ಣು ಶಿಶುವನ್ನು ಎಸೆದು ಹೋದ ಘಟನೆ ಆಗಸ್ಟ್ 10 ರ ಸೋಮವಾರ ಮುಂಜಾನೆ ಬೆಳಕಿಗೆ ಬಂದಿದೆ.

ನಗರದ ಚಿತ್ತರಂಜನ್ ಸರ್ಕಲ್ ಬಳಿ ಇರುವ ಇರುವ ತ್ಯಾಜ್ಯದ ಡಬ್ಬಿಯಲ್ಲಿ ನವಜಾತ ಹೆಣ್ಣು ಮಗುವನ್ನು ಎಸೆದು ಹೋಗಿದ್ದಾರೆ. ಇಂದು ಬೆಳಿಗ್ಗೆ ನಗರ ಸಭೆಯ ಸ್ವಚ್ಚತಾ ಸಿಬಂದಿಗಳು ಹೊಟೇಲ್ನವರು ಎಸೆದ ಬಾಳೆ ಎಲೆಯ ತ್ಯಾಜ್ಯದ ಸಂಗ್ರಹಿಸಲು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ,
ತ್ಯಾಜ್ಯ ತುಂಬಿದ್ದ ಡಬ್ಬಿಯಲ್ಲಿ ನವಜಾತ ಶಿಶುಅಳುವುದನ್ನು ಗಮನಿಸಿದ ಪೌರ ಕಾರ್ಮಿಕರು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಸದ್ಯ ನಗರದ ಬಿ.ಆರ್ ಶೆಟ್ಟಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.