ಬೈಂದೂರು, ಆ 10 (DaijiworldNews/PY): ಬೈಂದೂರು ತಾಲೂಕಿನ ನಾವುಂದ, ನಾಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಲವು ಪ್ರದೇಶಗಳು ಬಿಡದೇ ಸುರಿಯುತ್ತಿರುವ ಮಳೆಯಿಂದ ಪ್ರವಾಹ ಸಮಸ್ಯೆ ಎದುರಿಸುತ್ತಿದ್ದು, ನೆರೆ ಪೀಡಿತ ಪ್ರದೇಶಗಳಿಗೆ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.


ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜು ಪೂಜಾರಿ, ಬೈಂದೂರು ಕ್ಷೇತ್ರ ಕಾಂಗ್ರೆಸ್ ಮುಖಂಡರಾದ ಮದನ್ ಕುಮಾರ್, ಶೇಖರ್ ಪೂಜಾರಿ, ನಾವುಂದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ನರಸಿಂಹ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.