ಮಂಗಳೂರು, ಆ. 10, (DaijiworldNews/SM): ದ.ಕ. ಜಿಲ್ಲೆಯಲ್ಲಿ ಒಂದೆಡೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದರೆ, ಮತ್ತೊಂದೆಡೆ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಕೂಡ ಉತ್ತಮವಾಗಿದೆ. ಆಗಸ್ಟ್ 10ರ ಸೋಮವಾರದಂದು 533 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಸೋಮವಾರದಂದು 146 ಮಂದಿಯಲ್ಲಿ ಸೊಂಕು ಪತ್ತೆಯಾಗಿದೆ. ಈ ಪೈಕಿ ಪ್ರಾಥಮಿಕ ಸಂಪರ್ಕದಿಂದ 15 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 81 ಐಎಲ್ಐ ಪ್ರಕರಣಗಳಾಗಿದ್ದು, 16 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿವೆ. ಇನ್ನು 30 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ಈ ನಡುವೆ ನಾಲ್ವರು ವಿದೇಶದಿಂದ ಮರಳಿದವರಲ್ಲಿ ಸೋಂಕು ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಇಂದಿನ ಪಾಸಿಟಿವ್ ನೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 7353ಕ್ಕೆ ಏರಿಕೆಯಾಗಿದೆ. ಸದ್ಯ 2910 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದಿನ ಗುಣಮುಖರಾದವರ ಮೂಲಕ ಜಿಲ್ಲೆಯಲ್ಲಿ ಒಟ್ಟು 4215 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಇನ್ನು ಇಂದು ಪಾಸಿಟಿವ್ ಪತ್ತೆಯಾದವರ ಪೈಕಿ ಮಂಗಳೂರಿನ 94 ಮಂದಿಗೆ, ಬಂಟ್ವಾಳದ 11 ಮಂದಿಗೆ, ಪುತ್ತೂರಿನ 7, ಸುಳ್ಯದ ಒಬ್ಬರಿಗೆ, ಬೆಳ್ತಂಗಡಿಯ 16 ಮಂದಿಗೆ, ಇತರ ಜಿಲ್ಲೆಯ 17 ಮಂದಿಗೆ ಸೋಂಕು ದೃಢಪಟ್ಟಿದೆ.
ಆ.10ರಂದು ಕೊರೊನಾ ಸೋಂಕಿಗೆ 8 ಮಂದಿ ಬಲಿಯಾಗಿದ್ದಾರೆ.