ಪುತ್ತೂರು, ಆ 11 (Daijiworld News/MSP): ಪಿಕಪ್ ವಾಹನದಲ್ಲಿ ಜೋಳದ ಲೋಡ್ ಜೊತೆಗೆ ಭಾರೀ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪುತ್ತೂರು ನಗರ ಪೊಲೀಸರು ಭೇದಿಸಿದ್ದು, ಸುಮಾರು 1.5 ಕ್ವಿಂಟ್ವಾಲ್ ನಷ್ಟು ಗಾಂಜಾ ವಶಕ್ಕೆ ಪಡೆದಿದ್ದಾರೆ.

ಪುತ್ತೂರು ನಗರ ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀಪು ಚಾಲಕ, ಕಾರು ಚಾಲಕ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪಾಟ್ರಕೋಡಿ ಸಮೀಪ ಈ ಕಾರ್ಯಾಚರಣೆ ನಡೆದಿದ್ದು ಇಷ್ಟೊಂದು ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆಯಾಗಿರುವುದು ಪುತ್ತೂರಿನಲ್ಲಿ ಇದೇ ಮೊದಲು ಎನ್ನಲಾಗಿದೆ.